ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಆಸ್ಪತ್ರೆ ಸೇರಿದ್ದು, ಪುತ್ರನ ಅನುಪಸ್ಥಿತಿಯಲ್ಲಿ ಜೆಡಿಎಸ್ ಮುಖಂಡ ಹಾಗೂ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ವೈದ್ಯರ ಸಲಹೆಗೆ ವಿರುದ್ಧವಾಗಿ ತಮ್ಮ 92ನೇ ವಯಸ್ಸಿನಲ್ಲಿಯೂ ಪೂರ್ಣ ಪ್ರಮಾಣದ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.
ನಿರ್ಣಾಯಕ ಘಟ್ಟದಲ್ಲಿ ಪುತ್ರನ ಅನುಪಸ್ಥಿತಿಯನ್ನು ಸರಿದೂಗಿಸಲು, ದೈಹಿಕವಾಗಿ ಅಸಮರ್ಥರಾಗಿದ್ದರೂ ಸಹ ದೇವೇಗೌಡರು ಚುನಾವಣಾ ಪ್ರಚಾರ ಕಣಕ್ಕಿಳಿದಿದ್ದಾರೆ.
ಕುಮಾರಸ್ವಾಮಿ ಹೇಳಿದ ಕಡೆ ಪ್ರಚಾರ ಮಾಡುತ್ತೇನೆ. ಇಲ್ಲಿ ಕೆಲವು ಅಭಿಮಾನಿಗಳು ನನ್ನ ಹೆಗಲ ಮೇಲೆ ಕುರಿ ಹೊರಿಸಿದ್ರು. ನನಗೆ 92 ವರ್ಷ ವಯಸ್ಸಾದ್ರೂ ನಿಮ್ಮ ಮುಂದೆ ಅದನ್ನು ಪ್ರದರ್ಶಿಸಿದ್ದೇನೆ. ಕುಮಾರಸ್ವಾಮಿ ಆಸ್ಪತ್ರೆಯಲ್ಲಿದ್ದಾರೆ, ಅದೆಲ್ಲ ದೇವರ ಇಚ್ಚೆ. ಕುಮಾರಸ್ವಾಮಿ ಮತ್ತೆ ಪ್ರಚಾರ ಮಾಡ್ತಾರೆ ಎಂದರು.
