ಬೆಂಗಳೂರು :
ಕಾಂಗ್ರೆಸ್ ಮಾಜಿ ಸಚಿವ ಡಿ.ಬಿ ಇನಾಮ್ದಾರ್ 2023ರ ವಿಧಾನ ಸಭೆ ಚುನಾವಣೆಯಲ್ಲಿ ಕಿತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆದ್ರೆ ಅನಾರೋಗ್ಯ ಕಾರಣದಿಂದ ಅವರ ಬದಲಿಗೆ ಬಾಬಾಸಾಹೇಬ್ ಪಾಟೀಲ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಡಿ.ಬಿ ಇನಾಮ್ದಾರ್ ಶ್ವಾಸಕೋಶ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಡ ರಾತ್ರಿ ವಿಧಿವಶರಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ