ಕಾರ್ಮಿಕರ ದಿನಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ತೈಲ ಕಂಪನಿಗಳು…!

ನವದೆಹಲಿ:

    ಮೇ ತಿಂಗಳ ಮೊದಲ ದಿನ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿವೆ. ಮೇ 1 ರಂದು ವಾಣಿಜ್ಯ ಬಳಕೆಯ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯನ್ನು ಮಾಡಿವೆ . ವಾಣಿಜ್ಯ ಅನಿಲ ಸಿಲಿಂಡರ್‌ ಗಳ ಬೆಲೆಯಲ್ಲಿ ಈ ಕಡಿತವನ್ನು ಸರ್ಕಾರಿ ತೈಲ ಕಂಪನಿಗಳು ಮಾಡಿವೆ. ಇದರೊಂದಿಗೆ ಜೆಟ್ ಇಂಧನ ಬೆಲೆಯನ್ನೂ ಕಡಿತಗೊಳಿಸಲಾಗಿದೆ.

    ತೈಲ ಮಾರುಕಟ್ಟೆ ಕಂಪನಿಗಳು ಇಂದು 19 ಕೆಜಿ ವಾಣಿಜ್ಯ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 172 ರೂ. ಇಳಿಸಿದೆ.

      ಮುಂಬೈ ಬಗ್ಗೆ ಹೇಳುವುದಾದರೆ, ಈ ಮೊದಲು ವಾಣಿಜ್ಯ ಗ್ಯಾಸ್ ಸಿಲಿಂಡರ್ 1980 ರೂ. ಗೆ ಸಿಗುತ್ತಿತ್ತು. ಈಗ ಅದು 1808.50 ರೂ.ಗೆ ಇಳಿದಿದೆ. ಮತ್ತೊಂದೆಡೆ, ಚೆನ್ನೈನಲ್ಲಿ 2192.50 ರೂ.ಗಳ ಸಿಲಿಂಡರ್ ಗೆ ಈಗ 2021.50 ರೂ.ಗಳನ್ನು ಪಾವತಿಸಬೇಕಾಗುತ್ತದೆ.ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 14 ಕೆಜಿ ಗೃಹ ಬಳಕೆ ಸಿಲಿಂಡರ್ ಬೆಲೆ 1115.5 ರೂಪಾಯಿ ಆಗಿದ್ದರೆ, 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯೂ 1856 ರೂಪಾಯಿಯಷ್ಟಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link