ಟ್ರಕ್‌ಗೆ  ಎಸ್‌ಯುವಿ  ಡಿಕ್ಕಿ : 11 ಸಾವು

ಛತ್ತೀಸ್‌ಗಢದ

    ಬಲೋದ್ ಜಿಲ್ಲೆಯಲ್ಲಿ ಟ್ರಕ್‌ಗೆ  ಎಸ್‌ಯುವಿ  ಡಿಕ್ಕಿ ಹೊಡೆದು ಐವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

     ಸಂತ್ರಸ್ತರು, ಧಮ್ತಾರಿ ಜಿಲ್ಲೆಯ ಸೋರಂ-ಭಟ್‌ಗಾಂವ್ ಗ್ರಾಮದ ಸ್ಥಳೀಯರು ಮದುವೆಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ, ರಾಷ್ಟ್ರೀಯ ಹೆದ್ದಾರಿ -30 ರಲ್ಲಿ ಪುರೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಜಾಗ್ತಾರಾ ಗ್ರಾಮದ ಬಳಿ ಬುಧವಾರ ರಾತ್ರಿ ಈ ಅಪಘಾತ ಸಂಭವಿಸಿದೆ.

     ಸಂತ್ರಸ್ತರು ಕಂಕೇರ್ ಜಿಲ್ಲೆಯ ಮರ್ಕಟೋಲಾ ಗ್ರಾಮದಲ್ಲಿ ಮದುವೆಗೆ ಹೋಗುತ್ತಿದ್ದಾಗ ಅವರ ವಾಹನವು ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಪುರೂರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಅರುಣ್ ಕುಮಾರ್ ಸಾಹು ತಿಳಿಸಿದ್ದಾರೆ.

      ಮಹೀಂದ್ರಾ ಬೊಲೆರೊದಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಮಗುವೊಂದು ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದೆ ಎಂದು ಅವರು ಹೇಳಿದರು.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನ್ನ ವಾಹನವನ್ನು ಬಿಟ್ಟು ಪರಾರಿಯಾಗಿರುವ ಟ್ರಕ್ ಚಾಲಕನನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link