ನವದೆಹಲಿ:
ಮಹಾರಾಷ್ಟ್ರ ಸರ್ಕಾರ ಕಾನೂನು ಪ್ರಕಾರ ಕಾರ್ಯನಿರ್ಹಹಿಸಲಿಲ್ಲ. ಉದ್ಧವ್ ಠಾಕ್ರೆ ಸರ್ಕಾರವನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ.
ಮಹಾರಾಷ್ಟ್ರ ಮೂಲ ಶಿವಸೇನೆಯಿಂದ ಬಂಡಾಯವೆದ್ದು ಏಕನಾಥ ಶಿಂಧೆ ಹಿಂದೆ ಹೋಗಿದ್ದ 16 ಮಂದಿ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿ ಸೇರಿದಂತೆ 2 ತೀರ್ಪುಗಳನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಿದೆ.ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್, ಉದ್ಧವ್ ಠಾಕ್ರೆ ವಿಶ್ವಾಸಮತ ಸಾಬೀತು ಪಡಿಸದೆ ರಾಜೀನಾಮೆ ನೀಡಿದ್ದರಿಂದ ಸರ್ಕಾರವನ್ನು ಮರುಸ್ಥಾಪಿಸಲಾಗದು ಎಂದು ಹೇಳಿದೆ.
ಉದ್ಧವ್ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ನಿರ್ಧಾರಕ್ಕೆ ಬಂದಿದ್ದು, ಬಹುಮತ ಸಾಬೀತಿಗೆ ಸೂಚಿಸಿದ ನಿರ್ಧಾರ ತಪ್ಪು ಎಂದು ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ