ಬೆಂಗಳೂರು :
ದ್ವಿತೀಯ ಪಿಯುಸಿ ಮರು ಮೌಲ್ಯಮಾಪನದಲ್ಲಿ ಅಚ್ಚರಿ ಫಲಿತಾಂಶ ಬಂದಿದ್ದು, ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ವಿದ್ಯಾರ್ಥಿ ಕುಶ್ ನಾಯ್ಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.
ದ್ವಿತೀಯ ಪಿಯುಸಿ ಫಲಿತಾಂಶದ ದಿನ ಕಲಾ ವಿಭಾಗದಲ್ಲಿ ಜಯನಗರ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್ 593 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು.
ಆದರೆ ಆದರೆ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶ್ ನಾಯ್ಕ್ ದ್ವಿತೀಯ ಪಿಯುಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಮೌಲ್ಯಮಾಪನ ಫಲಿತಾಂಶದಲ್ಲಿ ಕುಶ್ ನಾಯ್ಕ್ ಅವರು ಕಲಾ ವಿಭಾಗದ ಐಚ್ಚಿಕ ಕನ್ನಡ ವಿಷಯದಲ್ಲಿ 592 ಅಂಕಗಳನ್ನು ಪಡೆದಿದ್ದರು. ಆದರೆ ಮರು ಮೌಲ್ಯಪಾನದಲ್ಲಿ 594 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಬಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ