ಕೆಇಆರ್‌ಸಿ ಆದೇಶ ಕೂಡಲೇ ರದ್ದುಪಡಿಸಿ : ಕುರುಬೂರು ಶಾಂತಕುಮಾರ್‌

ಬೆಳಗಾವಿ: 

        ಕೃಷಿ ಪಂಪ್​​ಸೆಟ್​ಗಳಿಗೆ ಆಧಾರ್ ಲಿಂಕ್ ಮಾಡಲು ರೈತರು ಬಿಡುವುದಿಲ್ಲ. ಕೆಇಆರ್‌ಸಿ ಆದೇಶ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರದ್ದುಗೊಳಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಒತ್ತಾಯಿಸಿದರು.

    ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ರಾಜ್ಯದಲ್ಲಿ 40 ಲಕ್ಷ ಕೃಷಿ ರೈತರು ಕೃಷಿ ಉತ್ಪನ್ನಗಳನ್ನು ಕಷ್ಟದಲ್ಲಿ ಬೆಳೆದು ನಷ್ಟ ಅನುಭವಿಸುತ್ತಿದ್ದಾರೆ ಎಂದರು. ಇಂತಹ ಸಂದರ್ಭದಲ್ಲಿ ಆಧಾರ್ ಲಿಂಕ್ ಮಾಡಿದರೆ ಸಬ್ಸಿಡಿ ನೀಡುವುದಾಗಿ, ಇಲ್ಲವೇ ಉಚಿತ ವಿದ್ಯುತ್ ನಿಲ್ಲಿಸುತ್ತೇವೆ ಎಂದು ಕೆಇಆರ್​ಸಿ ಆದೇಶ ಹೊರಡಿಸಿರುವುದು ಸರಿಯಲ್ಲ.

    ಇದನ್ನು ನಾವು ಒಪ್ಪಲು ಸಾಧ್ಯವಿಲ್ಲ. ಕೂಡಲೇ ಇದನ್ನು ವಾಪಸ್ ಪಡೆಯಬೇಕು, ಇಲ್ಲವೇ ಮುಖ್ಯಮಂತ್ರಿಗಳೇ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ರಾಜ್ಯದ ರೈತ ಮುಖಂಡರು ಬೆಂಗಳೂರಿನ ವಿಧಾನಸೌಧದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒತ್ತಾಯಿಸಿದ್ದೇವೆ ಎಂದರು.

 

    2022 -23ರಲ್ಲಿ ಸಾಲಿನಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘದಿಂದ 39 ದಿನಗಳು ಕಬ್ಬು ಬೆಳೆಗಾರ ರೈತರು ಸತತ ಹೋರಾಟ ಮಾಡಿದಾಗ, ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿ ಬೆಳಗಾವಿ ವಿಧಾನಸಭೆಯಲ್ಲಿ ಕಬ್ಬುದರ ಏರಿಕೆ ಮಾಡುವಂತೆ ಆಗ್ರಹಿಸಿದಾಗ ರಾಜ್ಯ ಸರ್ಕಾರ ಕಬ್ಬಿನ ಎಫ್​ಆರ್​ಪಿ ಹೆಚ್ಚುವರಿ ದರ ಟನ್​ಗೆ 150 ರೂ ನಿಗದಿ ಮಾಡಿ ಆದೇಶ ಹೊರಡಿಸಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap