ಬೆಂಗಳೂರು:
ಸರ್ಕಾರದ ಯೋಜನೆಗಳು ನಿಯಮ, ನಿಬಂಧನೆಗಳಿಗೆ ಒಳಪಟ್ಟಿರುತ್ತವೆ, ಷರತ್ತುಗಳಿಲ್ಲದೆ ಯಾವುದೇ ಸರ್ಕಾರಿ ಯೋಜನೆ ಜಾರಿಯಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಯವರು ಶುಕ್ರವಾರ ಹೇಳಿದ್ದಾರೆ.
ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿನ 5 ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಮತದಾರರ ಮುಂದೆ ಇರಿಸಿತ್ತು.ಪಕ್ಷ ಅಧಿಕಾರಕ್ಕೆ ಬಂದ ಮರುಘಳಿಗೆಯಲ್ಲೇ ಈ ಯೋಜನೆಗಳನ್ನು ಜಾರಿಗೆ ತರುವುದಾಗಿಯೂ ಭರವಸೆ ನೀಡಿತ್ತು.
ಇದೀಗ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಘೋಷಿತ ಯೋಜನೆಗಳನ್ನು ಜಾರಿಗೆ ತರುವ ಬಗ್ಗೆ ಮಹತ್ವದ ಚರ್ಚೆ ನಡೆಯುತ್ತಿದೆ.