ನವದೆಹಲಿ
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿರುವ ಉತ್ತರ ವಜೀರಿಸ್ತಾನದ ಬುಡಕಟ್ಟು ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿ ಭಯೋತ್ಪಾದಕರೊಂದಿಗೆ ಎನ್‌ಕೌಂಟರ್ ನಡೆಸಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನಿ ಸೇನೆಯ ಇಬ್ಬರು ಯೋಧರು ಸಾವನ್ನಪ್ಪಿದ್ದರೆ ಇದೇ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆ.
ಪಾಕಿಸ್ತಾನ ಸೇನೆಯ ಮೀಡಿಯಾ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್(ISPR) ನಿನ್ನೆ ಸೈನಿಕರು ಮತ್ತು ಭಯೋತ್ಪಾದಕರ ನಡುವಿನ ಎನ್‌ಕೌಂಟರ್ ಬಗ್ಗೆ ಮಾಹಿತಿ ನೀಡಿದೆ. ಶನಿವಾರ (ಜೂನ್ 3) ಸೇನಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದ್ದು, ಇದರಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದು ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಿದರು.
ಯೋಧರು ಭಯೋತ್ಪಾದಕರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ್ದಾರೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‌ಪಿಆರ್) ಬಹಿರಂಗಪಡಿಸಿದೆ. ಈ ವೇಳೆ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಹತರಾದ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸೇನೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಯಕ್ ಜಹೀರ್ ಅಬ್ಬಾಸ್(38) ಮತ್ತು ಲ್ಯಾನ್ಸ್ ನಾಯಕ್ ಮೈರಾಜ್ ಉದ್ ದಿನ್ (23) ಮೃತಪಟ್ಟಿದ್ದಾರೆ. ನಾಯಕ್ ಜಹೀರ್ ಅಬ್ಬಾಸ್ ಖುಶಾಬ್ ಜಿಲ್ಲೆಯವರು ಮತ್ತು ಲ್ಯಾನ್ಸ್ ನಾಯಕ್ ಮೈರಾಜ್ ಉದ್ ದಿನ್ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯವರು.