ಕಲಬುರಗಿ :
ರಾಜ್ಯದ ಕಲಬುರಗಿ, ಮೈಸೂರು ಮತ್ತು ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕಲಬುರಗಿ ನಗರದಲ್ಲಿರುವ ಬೃಹತ್ ಇಎಸ್‌ಐಸಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜನ್ನೇ ಏಮ್ಸ್ ಮೇಲ್ದರ್ಜೆಗೆ ಏರಿಸುವಂತೆ ಮನವಿ ಮಾಡಿದ್ರೂ ಸ್ಪಂದಿಸಿಲ್ಲ.50 ಎಕರೆ ಜಾಗ ಇದ್ದು, ಅತ್ಯಾಧುನಿಕ ಕಟ್ಟಡಗಳಿವೆ. ಸಕಲ ಸೌಲಭ್ಯಗಳೂ ಇವೆ. ಕೇಂದ್ರಕ್ಕೆ ಮತ್ತೊಮ್ಮೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದಾರೆ.
ಕಲಬುರಗಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆರಂಭಿಸಲಾಗುವುದು. ಅದಕ್ಕಾಗಿ ಕಟ್ಟಡ ನಿರ್ಮಿಸುವ ಕೆಲಸ ನಡೆದಿದೆ. ನಿರ್ಮಾಣವಾಗಿ ಆರಂಭವಾಗದೇ ಇರುವ ಟ್ರಾಮಾ ಸೆಂಟರ್ ಅನ್ನು ಮೂರು ತಿಂಗಳಲ್ಲಿ ಆರಂಭಿಸಲಾಗುವುದು. ವೈದ್ಯಕೀಯ ಕಾಲೇಜುಗಳಲ್ಲಿ ಸೀಟ್ ಹೆಚ್ಚಳದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
