ಡಿಸಿಎಂಗೆ ಬಿಗ್‌ ರಿಲೀಫ್‌ ನೀಡಿದ ಹೈಕೋರ್ಟ್‌…!

ಬೆಂಗಳೂರು:  

       ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ.

     ಕೋವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ಇಂದು ಈ ಪ್ರಕರಣಗಳ ವಿಚಾರಣೆ ನಡೆಸಿದ ಹೈ ಕೋರ್ಟ್ ಎಲ್ಲ ಪ್ರಕರಣಗಳನ್ನೂ ರದ್ದು ಮಾಡುವಂತೆ ಆದೇಶಿಸಿದೆ.

     ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ್ದರು. ಈ ವೇಳೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು (ಜೂನ್ 16) ಆದೇಶ ಹೊರಡಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link