ಸಾರಿಗೆ ಇಲಾಖೆ : ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು:

    ಕೆಎಸ್‌ಆರ್‌ಟಿಸಿ ತನ್ನ ಸಿಬ್ಬಂದಿಗಳ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿದ್ದು, ಜುಲೈ 5 ರಿಂದ ಆಗಸ್ಟ್‌ 18ವರೆಗೂ ಆನ್‌ಲೈನ್‌ ಮೂಲಕ ವರ್ಗಾವಣೆ ನಡೆಯಲಿದೆ ಎಂದು ತಿಳಿಸಿದೆ.

    ಈ ಕುರಿತು ಮಂಗಳವಾರ (ಜುಲೈ 4) ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ್‌ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ತತ್ಸಂಬಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2021ರ ಮಾರ್ಚ್‌ 26 ರಲ್ಲಿ ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, ಅದರಂತೆಯೇ ವರ್ಗಾವಣೆ ನಡೆಯಲಿದೆ ಎಂದು ತಿಳಿಸಿದೆ.

    ಆದೇಶದಂತೆ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ 05-07-2023ರ ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾಗಲಿದ್ದು, 18-08-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrttorm/transfer ರಲ್ಲಿ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link