ಬಸ್ ಮತ್ತು ಕಾರಿನ ನಡುವೆ ಡಿಕ್ಕಿ : 6 ಸಾವು

ನವದೆಹಲಿ:

    ಸಾವಿನ ಸಪಾನದಂತಾಗಿರುವ  ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6  ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

     ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಎಂದು ತಿಳಿದುಬಂದಿದೆ. ಘಟನೆಯಲ್ಲಿ 8 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

    ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ