370 ನೇ ವಿಧಿ ರದ್ದತ್ತಿ : ಆ.2ಕ್ಕೆ ಸುಪ್ರೀಂನಲ್ಲಿ ವಿಚಾರಣೆ

ನವದೆಹಲಿ:

     ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್ 2ರಿಂದ ಆಲಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.

     ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು, ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್‌ 2 ರಿಂದ ಆರಂಭಿಸುವುದಾಗಿ ಹೇಳಿದೆ. ಸೋಮವಾರ ಮತ್ತು ಶುಕ್ರವಾರ ಹೊರತುಪಡಿಸಿ ಪ್ರತಿದಿನವೂ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಿದೆ.

     ಜುಲೈ 27 ರೊಳಗೆ ಎಲ್ಲಾ ದಾಖಲೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬೇಕು. ಜೊತೆಗೆ ಈ ದಾಖಲೆಗಳನ್ನು ನಿರ್ವಹಿಸಲು ಇಬ್ಬರು ವಕೀಲರನ್ನು ನೊಡೆಲ್ ಅಧಿಕಾರಿಗಳಾಗಿ ನೇಮಿಸಲಾಗುವುದು ಎಂದು ಪೀಠ ಹೇಳಿದೆ.

 
    ಮುಖ್ಯನ್ಯಾಯಮೂರ್ತಿ ಡಿ. ಚಂದ್ರಚೂಡ್​​​ ಸೇರಿದಂತೆ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನು ಒಳಗೊಂಡ 5 ನ್ಯಾಯಮೂರ್ತಿಗಳಿರುವ ಪೀಠ ಈ ಅರ್ಜಿಗಳನ್ನು ವಿಚಾರಣೆ ನಡೆಸಲಿದೆ.ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಸುಮಾರು ನಾಲ್ಕು ವರ್ಷಗಳ ಬಳಿಕ ವಿಚಾರಣೆ ನಡೆಯುತ್ತಿದೆ.
    370ನೇ ವಿಧಿಯನ್ನು ಆಗಸ್ಟ್ 2019 ರಲ್ಲಿ ಶಾಸಕಾಂಗ ಮತ್ತು ಕಾರ್ಯಕಾರಿ ನಿರ್ಧಾರಗಳ ಮೂಲಕ ರದ್ದುಗೊಳಿಸಲಾಯಿತು, ನಂತರ ಸಂಸತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆಯ ಪ್ರಕಾರ ರಾಜ್ಯವನ್ನು ವಿಭಜಿಸಲು ಅಂಗೀಕರಿಸಿತುರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದುಪಡಿಸಿದ ದಿನದಿಂದ ಕೇಂದ್ರಾಡಳಿತ ಪ್ರದೇಶ ಸ್ಥಿರತೆ ಮತ್ತು ಪ್ರಗತಿ ಕಂಡಿದ್ದು ಕಲ್ಲು ತೂರಾಟ ಈಗ ನಡೆಯುತ್ತಿಲ್ಲ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
    ಮೂರು ವರ್ಷಗಳ ನಂತರ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತಿರುವುದ ಹಿನ್ನೆಲೆಯಲ್ಲಿ ವಿಚಾರಣೆಗೂ ಮುನ್ನ ದಿನ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ, ತನ್ನ ಕ್ರಮವನ್ನು ಸಮರ್ಥಿಸಿಕೊಂಡಿತು.

Recent Articles

spot_img

Related Stories

Share via
Copy link