ಕಲ್ಯಾಣ ಯೋಜನೆಗಳ ಅನುದಾನ ಕಡ್ಡಾಯವಾಗಿ ಬಳಕೆ ಮಾಡಿಕೊಳ್ಳಿ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು: 

     ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಕಲ್ಯಾಣ ಕಾರ್ಯಕ್ರಮಗಳಿಗೆ 2022-23ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ಮಂಜೂರಾದ 216 ಕೋಟಿ ಅನುದಾನ ಬಳಕೆಯಾಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

     ವಿಧಾನ ಪರಿಷತ್‌ನಲ್ಲಿ ನಡೆದ ಚರ್ಚೆಯ ವೇಳೆ  ಪ್ರಶ್ನೆಗಳಿಗೆ ಉತ್ತರಿಸಿದ ಪ್ರಿಯಾಂಕ್‌ ಖರ್ಗೆ,  ಅಭಿವೃದ್ಧಿ ಉದ್ದೇಶಕ್ಕಾಗಿ 716 ಕೋಟಿ  ಅನುದಾನ ನೀಡಲಾಗಿದೆ, ಆದರೆ ಅದರಲ್ಲಿ ಕೇವಲ ರೂ. 501 ಕೋಟಿ ಬಳಕೆಯಾಗಿದೆ. ಕಲ್ಯಾಣ ಯೋಜನೆಗಳಿಗೆ ನೀಡಿರುವ ಅನುದಾನವನ್ನು ಕಡ್ಡಾಯವಾಗಿ ಬಳಸಿಕೊಳ್ಳಬೇಕು ಮತ್ತು ಅನುದಾನವನ್ನು ಏಕೆ ಬಳಸಿಲ್ಲ ಎಂಬ ಬಗ್ಗೆ ವರದಿ ಕೇಳುವುದಾಗಿ ಹೇಳಿದರು.

     ಪಂಚತಂತ್ರ 2.0 ತಂತ್ರಾಂಶದ ಮೂಲಕ ಪಂಚಾಯತಿಗಳಿಗೆ ನೀಡಿರುವ ಅನುದಾನವನ್ನು ಎರಡು ತಿಂಗಳಲ್ಲಿ ಸದುಪಯೋಗಪಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯ ಸರ್ಕಾರ ಈಗಾಗಲೇ ಪಂಚತಂತ್ರ 2.0 ಸಾಫ್ಟ್‌ವೇರ್‌ನ ಪ್ರಾಯೋಗಿಕ ಚಾಲನೆಯನ್ನು ಪ್ರಾರಂಭಿಸಿದ್ದು, ಶೀಘ್ರದಲ್ಲೇ ಇದನ್ನು ಎರಡು ಆಯ್ದ ಜಿಲ್ಲೆಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಪರಿಚಯಿಸಲಾಗುವುದು ಪ್ರಿಯಾಂಕ್  ತಿಳಿಸಿದ್ದಾರೆ.

 
    ಪಂಚಾಯಿತಿ ಸದಸ್ಯರಿಗೆ ಮೂರು ತಿಂಗಳಿಗೊಮ್ಮೆ ನೀಡುವ ಗೌರವಧನವನ್ನು ಪ್ರತಿ ತಿಂಗಳು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಬೇಕು ಎಂದು ಸದಸ್ಯರೊಬ್ಬರು ಸೂಚಿಸಿದಾಗ, ಸಾರಿಗೆ ಸಚಿವರೊಂದಿಗೆ ಚರ್ಚೆ ನಡೆಸುವುದಾಗಿ ಖರ್ಗೆ ಉತ್ತರಿಸಿದರು.

 

     ನಕಲಿ ಜಾತಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ 836 ಪ್ರಕರಣಗಳು ವರದಿಯಾಗಿವೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ವಿವರಿಸಿದರು. ರಾಜ್ಯದಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಒದಗಿಸಿ ಸರ್ಕಾರಿ ಉದ್ಯೋಗ ಪಡೆದಿರುವ 836 ಪ್ರಕರಣಗಳು ವರದಿಯಾಗಿವೆ. ಅದರಲ್ಲಿ  93 ಸೇವೆಗಳಿಂದ ವಜಾಗೊಳಿಸಲಾಗಿದೆ ಮತ್ತು 238 ಪ್ರಕರಣಗಳು ಜಿಲ್ಲಾ ಮಟ್ಟದ ಜಾತಿ ಪರಿಶೀಲನಾ ಸಮಿತಿಗಳಲ್ಲಿ ಬಾಕಿ ಉಳಿದಿವೆ ಎಂದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link