ಬೆಂಗಳೂರು:
ಬೆ -ಮೈ ಹೈವೇಯಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ.
ಎಕ್ಸ್‌ಪ್ರೆಸ್ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಬೈಕ್, ಆಟೋ, ಟ್ರಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದೆ.
ಜುಲೈ 13ರಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಆದೇಶ ಹೊರಡಿಸಲಾಗಿದೆ. ದ್ವಿಚಕ್ರ ವಾಹನ, ಆಟೋ, ಟ್ರ್ಯಾಕ್ಟರ್ ಸೇರಿ ಲಘು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಪ್ರತಿ ಗಂಟೆಗೆ 80 ರಿಂದ 100 ಕಿಲೋಮೀಟರ್ ಮಾತ್ರ ಚಲಿಸುವಂತೆ ಆದೇಶ ಹೊರಡಿಸಲಾಗಿದೆ.
ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತ ಹೆಚ್ಚಳ ಹಿನ್ನಲೆಯಲ್ಲಿ ಈ ಕ್ರಮ ಕೈಗೊಂಡಿದ್ದು, ಸಣ್ಣ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಮೋಟಾರು ವಾಹನ ಕಾಯ್ದೆ ಅನ್ವಯ ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ