ಚಿತ್ರದುರ್ಗ:
ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು 36 ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.
ಮೃತರನ್ನು ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿ ನಿವಾಸಿಗಳಾದ ಮಂಜುಳಾ (23 ವ) ಮತ್ತು ಯುವಕ ರಘು (27ವ) ಎಂದು ಗುರುತಿಸಲಾಗಿದೆ.
ಮಂಜುಳಾ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟರೆ, ನೀರು ಸೇವಿಸಿ ಬೆಂಗಳೂರಿಗೆ ತೆರಳಿದ್ದ ರಘು ತೀವ್ರ ರೋಗಲಕ್ಷಣಗಳನ್ನು ಕಂಡು ನಂತರ ಮೃತಪಟ್ಟಿದ್ದಾರೆ. ನಿನ್ನೆ ಈ ಘಟನೆ ನಡೆದಿದ್ದು, ನಗರಸಭೆಯಿಂದ ಪೂರೈಕೆಯಾಗುವ ನೀರನ್ನು ಸೇವಿಸದಂತೆ ಸ್ಥಳೀಯ ನಿವಾಸಿಗಳಿಗೆ ಅಧಿಕಾರಿಗಳು ತಿಳಿಸಿದ್ದಾರೆ.