ಬಾಲಕಿ ಮೇಲೆ ಅತ್ಯಾಚಾರ : ಶಾಲೆ ಮುಚ್ಚಲು ಆಗ್ರಹ

ಬೆಂಗಳೂರು:

    ಶಾಲೆಯ 2ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪದಡಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ (65) ಅವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

   ಕೃತ್ಯದ ಬಗ್ಗೆ ಮಾಹಿತಿ ಪಡೆದ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ, ಸದಸ್ಯ ಶಶಿಧರ ಕೋಸಂಬಿ ನೇತೃತ್ವದ ತಂಡ, ಸಂತ್ರಸ್ತ ಬಾಲಕಿ ಮನೆ ಹಾಗೂ ಶಾಲೆಗೆ ಶನಿವಾರ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿತು.

 
    ಇದೇ ವೇಳೆ ಶಾಲೆ ಕಟ್ಟಡದ ಮೊದಲ ಮಹಡಿಯಲ್ಲಿರುವ ಆರೋಪಿ ಪುಷ್ಪರಾಜ್ ಮನೆಗೂ ಭೇಟಿ ನೀಡಿದ ತಂಡ,  ಹೆಚ್ಚಿನ ಮಾಹಿತಿ ಕಲೆಹಾಕಿತು.
   ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕೆ. ನಾಗಣ್ಣಗೌಡ ಅವರು, ‘ಸಂತ್ರಸ್ತ ವಿದ್ಯಾರ್ಥಿನಿ ಹಾಗೂ ಪೋಷಕರಿಗೆ ಸಾಂತ್ವನ ಹೇಳಲಾಗಿದೆ. ಕೃತ್ಯ ನಡೆದಿರುವ ಶಾಲೆ ಬಂದ್ ಮಾಡಿಸುವಂತೆ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಲಾಗಿದೆ. ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ಹೇಳಿದರು
    ‘ಶಾಲೆಯಲ್ಲಿ 1ರಿಂದ 10ನೇ ತರಗತಿಯವರೆಗೆ 140 ಮಕ್ಕಳು ಓದುತ್ತಿದ್ದಾರೆ. ಏಕಾಏಕಿ ಶಾಲೆ ಮುಚ್ಚಿದರೆ ಅವರಿಗೆ ಸಮಸ್ಯೆಯಾಗಲಿದೆ. ಹೀಗಾಗಿ, ಶಿಕ್ಷಣ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸೋಮವಾರ (ಆ. 7) ಪೋಷಕರ ಸಭೆ ನಡೆಸಲಾಗುವುದು. ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸಲು ಎಲ್ಲ ವ್ಯವಸ್ಥೆ ಮಾಡಲಾಗುವುದು’ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link