ಬೆಂಗಳೂರು
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡಿರುವ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನಿಲ್ಲದ ಸರ್ಕಸ್ ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಅಧಿಕಾರವಿಲ್ಲದ ರಾಜ್ಯ ಬಿಜೆಪಿ ಈಗ ಹೈಕಮಾಂಡ್ ನಾಯಕರಿಗೆ ಹಾಲು ಕರೆಯದ ಗೊಡ್ಡೆಮ್ಮೆಯಂತಾಗಿದೆಯೇ? ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಪ್ರಶ್ನಿಸಿದೆ.
ಬಿಜೆಪಿಯಲ್ಲಿ ಈಗ ಆಂತರಿಕ ಕಲಹ ಮುಗಿಲು ಮುಟ್ಟಿದೆ, ಪಕ್ಷವನ್ನು ಮುನ್ನಡೆಸಲಾಗದ ಅಧ್ಯಕ್ಷ ನಾಪತ್ತೆಯಾಗಿದ್ದಾರೆ, ಹೈಕಮಾಂಡ್ ಕರ್ನಾಟಕದ ಬಿಜೆಪಿಯತ್ತ ತಿರುಗಿಯೂ ನೋಡುತ್ತಿಲ್ಲ, ವಾರಕ್ಕೊಮ್ಮೆ ಬರುತ್ತಿದ್ದ ಉಸ್ತುವಾರಿ ಅರುಣ್ ಸಿಂಗ್ ನಾಪತ್ತೆ, ತಿಂಗಳಿಗೊಮ್ಮೆ ಬರುತ್ತಿದ್ದ ಜೆಪಿ ನಡ್ಡಾ ನಾಪತ್ತೆಯಾಗಿದ್ದಾರೆ, ಅಧಿಕಾರವಿದ್ದಾಗ ಇವರೆಲ್ಲಾ ಎಟಿಎಂನಲ್ಲಿನ ಹಣ ಡ್ರಾ ಮಾಡಿಕೊಳ್ಳಲು ಬರುತ್ತಿದ್ದರಾ ಎಂದು ಪ್ರಶ್ನಿಸಿರುವ ಕಾಂಗ್ರೆಸ್, ರಾಜ್ಯ ಬಿಜೆಪಿ ಈಗ ಅನಾಥ ಶಿಶು ಎಂದು ಕಾಲೆಳೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ