ಬೆಂಗಳೂರು
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಆಗಸ್ಟ್ 30ವರೆಗೆ ಉತ್ತಮ ಮಳೆ ಬೀಳಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಪ್ರದೇಶವಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡು ಪ್ರದೇಶದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡು ಪ್ರದೇಶ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಇದೂ ಕೂಡ ಮಳೆ ಬೀಳುವ ನಿರೀಕ್ಷೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ