ಬೆಂಗಳೂರು:
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡಿರಲಿಲ್ಲ. ಹೀಗಾಗಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದರು. ಇಂತಹ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಕೇಂದ್ರ ಗೃಹಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿರೋದಾಗಿ ತಿಳಿದು ಬಂದಿದೆ.
ಈ ಬಗ್ಗೆ ಜಗದೀಶ್ ಶೆಟ್ಟರ್ ಅವರ ಆಪ್ತ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ ಸುಮಾರು 10 ನಿಮಿಷಗಳ ಕಾಲ ಮಾತನಾಡಿರೋದಾಗಿ ತಿಳಿದು ಬಂದಿದೆ.
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಪರೇಷನ್ ಹಸ್ತ ಶುರು ಮಾಡಿದ ಬೆನ್ನಲ್ಲೇ, ಜಗದೀಶ್ ಶೆಟ್ಟರ್ ಗೆ ಅಮಿತ್ ಶಾ ಕರೆ ಮಾಡಿದ್ದು ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೇ ಮತ್ತೆ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರ್ ವಾಪಾಸ್ಸಿ ಆಗ್ತಾರಾ ಅನ್ನೋ ಅನುಮಾನಕ್ಕೂ ಕಾರಣವಾಗಿದೆ. ಆ ಬಗ್ಗೆ ಕಾದು ನೋಡಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ