ಮದರಸಾ ಶಿಕ್ಷಣ : ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ ಸಚಿವ

ಬೆಂಗಳೂರು:

   ಮುಸಲ್ಮಾನರ ಆರಾಧನಾ ಮತ್ತು ಕಲಿಕಾ ಕೇಂದ್ರಗಳಾದ ಮದರಸಾಗಳಲ್ಲಿ ವಿಜ್ಞಾನ, ಗಣಿತ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಎಲ್ಲಾ ವಿಷಯಗಳನ್ನು ಬೋಧಿಸುವುದನ್ನು ಖಚಿತಪಡಿಸಬೇಕೆಂದು ಅಧಿಕಾರಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸೂಚನೆ ನೀಡಿದ್ದಾರೆ.

     ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಸೋಮವಾರ ನಡೆದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮದರಸಾಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸಬೇಕು ಎಂದು ಸೂಚನೆ ನೀಡಿದರು.

     ವಕ್ಫ್ ಬೋರ್ಡ್‌ನಲ್ಲಿ 1,265 ಮದರಸಾಗಳು ನೋಂದಣಿಯಾಗಿದ್ದು, ಅಧಿಕಾರಿಗಳು 100 ಮದರಸಾಗಳಲ್ಲಿ 5,000 ಮಕ್ಕಳಿಗೆ ಪ್ರಾಯೋಗಿಕ ಆಧಾರದ ಮೇಲೆ ಕನ್ನಡವನ್ನು ಬೋಧನೆ ಮಾಡಬೇಕು. ಮುಂದಿನ ವರ್ಷದಿಂದ ರಾಜ್ಯದಾದ್ಯಂತ ಎಲ್ಲಾ ಮದರಸಾಗಳಿಗೆ ಬೋಧನೆಯನ್ನು ಪ್ರಾರಂಭಿಸಬೇಕು. ಈ ಕುರಿತು ವಿವರವಾದ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ಸೂಚಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link