ಮೈಸೂರು:
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲಿ ಜಗತ್ತಿನಲ್ಲಿಯೇ ವಿಶಿಷ್ಟವಾದ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಜಾರಿಗೊಳಿಸುತ್ತಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.
ಮಕ್ಕಳು, ಹಿರಿಯ ನಾಗರಿಕರು, ವಿಕಲಚೇತನರಿಗೆ ಹಲವು ಯೋಜನೆ ಜಾರಿಗೊಳಿಸುವುದಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ. ಶೀಘ್ರವೇ ಹಿರಿಯ ನಾಗರಿಕರು, ಮಕ್ಕಳು, ವಿಕಲಚೇತನರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸುವುದಾಗಿ ಅವರು ಘೋಷಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ