ಶಿವಮೊಗ್ಗದತ್ತ ಹಾರಿದ ಮೊದಲ ವಿಮಾನ : ಟಿಕೆಟ್‌ ದರ ಎಷ್ಟು ಗೊತ್ತ…?

ಬೆಂಗಳೂರು:

    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಸೇವೆ ಗುರುವಾರದಿಂದ ಆರಂಭಗೊಂಡಿದ್ದು ಇಂಡಿಗೋ ಸಂಸ್ಥೆಯು ಟಿಕೆಟ್‌ ದರವನ್ನು 2699ರೂಗಳಿಗೆ ನಿಗದಿ ಮಾಡಿದೆ. 

     ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗಕ್ಕೆ ತೆರಳಿದ ಮೊದಲ ಇಂಡಿಗೋ ವಿಮಾನವನ್ನು ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ, ಸಚಿವ ಎಂ.ಬಿ ಪಾಟೀಲ್​, ಶಾಸಕ ಬೇಳೂರು ಗೋಪಾಲಕೃಷ್ಣ, ಸಂಸದ ರಾಘವೇಂದ್ರ, ವಿಜಯೇಂದ್ರ, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ ಇನ್ನೂ ಹಲವರು ರಾಜಕೀಯ ಗಣ್ಯರು ಹತ್ತಿ ಸಂತಸಪಟ್ಟರು.

     ವಿಮಾನವು 9.50ಕ್ಕೆ ಸರಿಯಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗಕ್ಕೆ ಹೊರಟಿತು.

 

    ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ಶಿವಮೊಗ್ಗ ಅತೀ ದೊಡ್ಡ ವಿಮಾನ ನಿಲ್ದಾಣ ಎಂದು ಹೇಳಲು ಹೆಮ್ಮೆಯಾಗುತ್ತದೆ. ಇಲ್ಲಿ ನೈಟ್​ ಲ್ಯಾಡಿಂಗ್​ ವ್ಯವಸ್ಥೆಯೂ ಇದೆ. ಸಂಸದ ರಾಘವೇಂದ್ರ ಅವರ ವಿಶೇಷ ಪರಿಶ್ರಮದಿಂದ ಈ ಯೋಜನೆ ಇಂದು ಕಾರ್ಯರೂಪಕ್ಕೆ ಬಂದಿದೆ. ಇದರಿಂದ ಅದೆಷ್ಟೋ ಜನರಿಗೆ ಅನುಕೂಲವಾಗಲಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚು ವಿಮಾನಗಳು ಓಡಾಟ ಮಾಡುವಂತಾಗಲಿದೆ ಎನ್ನುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

     ಸಚಿವ ಎಂ.ಬಿ ಪಾಟೀಲ್​ ಮಾತನಾಡಿ, ಶಿವಮೊಗ್ಗಕ್ಕೆ ಮೊದಲ ವಿಮಾನ ಸೇವೆ ಪ್ರಾರಂಭವಾಗಿದೆ. ರಾಷ್ಟ್ರಕವಿ ಕುವೆಂಪು ಅವರು ಜನಿಸಿದ ಊರು ಶಿವಮೊಗ್ಗ ಆಗಿರುವುದರಿಂದ ಕುವೆಂಪು ವಿಮಾನ ನಿಲ್ದಾಣವೆಂದೇ ಹೆಸರಿಟ್ಟಿದ್ದೇವೆ. ಒಟ್ಟಾರೆಯಾಗಿ ಇದೊಂದು ಐತಿಹಾಸಿಕ ಕ್ಷಣ. ವಿಮಾನ ಆರಂಭದಿಂದ ಮಧ್ಯ ಕರ್ನಾಟಕಕ್ಕೆ ಬಹಳಷ್ಟು ಅನುಕೂಲವಾಗಲಿದೆ ಎಂದು ಹೇಳಿದರು

     ಮಾಜಿ ಸಚಿವ ಈಶ್ವರಪ್ಪ ಮಾತನಾಡಿ, “ರಾಜ್ಯ ವಿಮಾನ ನಿಲ್ದಾಣಗಳ ಸಾಲಿನಲ್ಲಿ ಶಿವಮೊಗ್ಗ ಸೇರಿಕೊಂಡಿರುವುದು ನಮಗೆಲ್ಲರಿಗೂ ತುಂಬಾ ಹೆಮ್ಮೆಯ ವಿಚಾರ. ವಿಶೇಷವಾಗಿ ಕರ್ನಾಟಕದಲ್ಲಿ ಶಿವಮೊಗ್ಗ ಅನೇಕ ವಿಚಾರವಾಗಿ ಪ್ರಸಿದ್ಧಿಯಾಗಿದ್ದರೂ ಕೂಡ ಏರ್​ಪೋರ್ಟ್​ ಇಲ್ಲ ಎನ್ನುವ ಕೊರತೆ ಇತ್ತು. ಮಾಜಿ ಸಿಎಂ ಯಡಿಯೂರಪ್ಪ ಹಾಗೆಯೇ ಈಗಿನ ಸಂಸದ ರಾಘವೇಂದ್ರ ಅವರ ಪೂರ್ಣ ಪರಿಶ್ರಮದಿಂದ ಇವತ್ತು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆಗಿದೆ. ಅವರಿಬ್ಬರಿಗೂ ನಾನು ಅಭಿನಂದನೆ ತಿಳಿಸುತ್ತೇನೆ” ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link