ಬೆಂಗಳೂರು
ಕನ್ನಡಿಗರ ಪೌರುಷ, ಕನ್ನಡಿಗರ ಸಾಹಸ, ಕನ್ನಡಿಗರ ಸ್ವಾಭಿಮಾನ, ಕನ್ನಡದ ಆಸ್ಮಿತೆಯನ್ನು ಕಾಂಗ್ರೆಸ್ ಕೇವಲ ರಾಜಕೀಯ ಅಸ್ತ್ರವಾಗಿಸಿಕೊಂಡು ಕಿವಿ ಮೇಲೆ ಹೂವಿಟ್ಟು ಅಣಕಿಸುತ್ತಿದೆ. ಕರ್ನಾಟಕದಲ್ಲಿರುವುದು ಸ್ಟಾಲಿನ್ ಅವರ ಗುಲಾಮ ಸರ್ಕಾರ. ಕನ್ನಡ, ಕರ್ನಾಟಕ, ನಾಡ ವಿರೋಧಿ ಕಾಂಗ್ರೆಸ್ಸಿಗೆ ಕನ್ನಡಿಗರು ಧಿಕ್ಕಾರ ಹಾಕುತ್ತಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಬಿಜೆಪಿ, ಕಾವೇರಿಯನ್ನು ತಮಿಳುನಾಡಿಗೆ ಬಿಟ್ಟು ಕನ್ನಡಿಗರ ಮಾನವನ್ನು ಕಾಂಗ್ರೆಸ್ ಸರ್ಕಾರ ಹರಾಜು ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಚುನಾವಣೆಗೂ ಮುನ್ನ ಕನ್ನಡಿಗರ ಆಸ್ಮಿತೆಯನ್ನು ಮುಂದೆ ಇಟ್ಟುಕೊಂಡು ಒಣ ರಾಜಕೀಯ ಮಾಡಿದ್ದ ಕಾಂಗ್ರೆಸ್ ಇಂದು ಕರ್ನಾಟಕಕ್ಕೆ ಮಹಾ ದ್ರೋಹವೆಸಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ. ಆಗ ಸೇವ್ ನಂದಿನಿ ಅಂತ ಸುಳ್ಳು ಸುದ್ದಿ ಸೃಷ್ಟಿಸಿ ಕನ್ನಡಿಗರ ದಾರಿ ತಪ್ಪಿಸಲಾಯಿತು.
ಹಿಂದಿ ಹೇರಿಕೆಯೆಂದು ಹುಸಿ ಪುಕಾರು ಹಬ್ಬಿಸಿ ಪ್ರಚಾರ ಗಿಟ್ಟಿಸಿಕೊಳ್ಳಲಾಯಿತು. ಮೇಕೆದಾಟು ವಿಚಾರ ನ್ಯಾಯಾಲಯದಲ್ಲಿದ್ದರೂ ಪಾದಯಾತ್ರೆಯ ನಾಟಕ ಮಾಡಲಾಯಿತು. ಈಗ, ಬರಗಾಲ ಬಂದಿದ್ದರೂ ಜಲಾಶಯಗಳು ಒಣಗುತ್ತಿದ್ದರೂ ಸಿದ್ದರಾಮಯ್ಯ ಅವರ ಸರ್ಕಾರ ಕದ್ದು ಮುಚ್ಚಿ ಕಾವೇರಿ ನೀರನ್ನು ಬಿಟ್ಟಿತು ಎಂದು ಬಿಜೆಪಿ ದೂರಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ