ಪಿಎಸ್ಐ ನೇಮಕಾತಿ ಹಗರಣ : ಅಮೃತ್‌ ಪಾಲ್‌ ಗೆ ಜಾಮೀನು…!

ಬೆಂಗಳೂರು:

      ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 

     ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಸೂಚಿಸಿದೆ. ಇನ್ನು ಬಂಧನವಾಗಿ ಒಂದು ವರ್ಷ ಎರಡು ತಿಂಗಳ ಬಳಿಕ ಅಮೃತ್ ಪೌಲ್ ಗೆ ಜಾಮೀನು ಸಿಕ್ಕಂತೆ ಆಗಿದೆ.

    2021ರ ಅಕ್ಟೋಬರ್ 3ರಂದು 545 ಪಿಎಸ್‌ಐಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು 92 ಕೇಂದ್ರಗಳಲ್ಲಿ ನಡೆಯಿತು. ಪಿಎಸ್ಐ ನೇಮಕಾತಿ ಹಗರಣ ಹೊರಬಂದ ಬಳಿಕ ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ 110 ಜನರನ್ನು ಬಂಧಿಸಲಾಗಿದೆ.

     ಅಮೃತ್ ಪೌಲ್ ಪಿಎಸ್‌ಐ ಹುದ್ದೆಯ ಆಕಾಂಕ್ಷಿಗಳಿಂದ 1.35 ಕೋಟಿ ರೂಪಾಯಿ ಹಣವನ್ನು ಪಡೆದಿದ್ದಾರೆ ಎಂಬ ಆರೋಪವಿದೆ. ತನಿಖೆ ವೇಳೆ ಈ ಹಣ ತಮ್ಮ ಸಹಾಯಕ ಹಾಗೂ ಬೇನಾಮಿ ಶಂಭುಲಿಂಗ ಸ್ವಾಮಿಗೆ ನೀಡಿದ್ದು ಬೆಳಕಿಗೆ ಬಂದಿತ್ತು. ಈತನಿಂದ 41 ಲಕ್ಷ ರೂ.ಗಳನ್ನು ಸಿಐಡಿ ವಶಪಡಿಸಿಕೊಂಡಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link