ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು, ಇದು ನನ್ನ ಮಾತಲ್ಲ : ಕೆ ಎಸ್‌ ಭಗವಾನ್‌

ಮೈಸೂರು:

      ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು, ಇದು ನನ್ನ ಮಾತಲ್ಲ ಹಾಗಂತ ರಾಷ್ಟ್ರಕವಿ ಕುವೆಂಪು ಹೇಳಿದ್ದರು ಎಂದು ವಿಚಾರವಾದಿ ಕೆ.ಎಸ್. ಭಗವಾನ್‌ ಹೇಳಿದ್ದಾರೆ.

     ಮಹಿಷ ದಸರಾ ಆಚರಣೆ ಸಮಿತಿಯಿಂದ ಇಲ್ಲಿನ ಪುರಭವನದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ನಾನು ಹಿಂದೂ ಧರ್ಮವನ್ನು ಯಾವಾಗಲೋ ಬಿಟ್ಟು ಬಿಟ್ಟೆ ಎಂದು ಕುವೆಂಪು ಯಾವಾಗಲೂ ಹೇಳುತ್ತಿದ್ದರು. ಆದರೆ, ಅವರ ಶಿಷ್ಯರಿಗೆ ಅದು ಅರ್ಥವಾಗಲಿಲ್ಲ.

     ಆದ್ದರಿಂದಲೇ ಕುವೆಂಪು, ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಹೇಳಿದ್ದರು. ಇದು ನನ್ನ ಮಾತಲ್ಲ ಕುವೆಂಪು ಅವರದ್ದು. ಇಲ್ಲದಿದ್ದರೆ ನನಗೆ ಹೊಡೆಯಲು ಬರುತ್ತಾರೆ. ನನ್ನನ್ನು ಕೊಂದು ಹಾಕಿ ಬಿಡುತ್ತಾರೆ. ಆದರೆ, ನಿಜ ಹೇಳಿಯೇ ಸಾಯಬೇಕು’ ಎಂದರು. ‘ಕುವೆಂಪು ಮಾತು ಅವರ ಶಿಷ್ಯರಿಗೆ ಈಗಲೂ ಅರ್ಥವಾಗಿಲ್ಲ’ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link