ಬೆಂಗಳೂರು:
ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು, ಗ್ರಾಮದಲ್ಲಿ ಇರುವ ಖಾಲಿ ಹುದ್ದೆಗೆ ಅನುಗುಣವಾಗಿ ಸೇವೆಗೆ ಸರ್ಕಾರ ನಿಯೋಜನೆ ಮಾಡಲಾಗುವುದು. ರಾಜ್ಯದಲ್ಲಿ ವೈದ್ಯರ ಕೊರತೆ ಇಲ್ಲದಿರುವ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಎಂಬಿಬಿಎಸ್ ಪದವೀಧರರಿಗೆ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದವರಿಗೂ ಈ ನಿಯಮ ಅನ್ವಯಿಸುತ್ತದೆ ಎಂದು ಹೇಳಿದರು.
ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವೈದ್ಯರನ್ನು ನೇಮಿಸಲಾಗುವುದು. ಅಗತ್ಯವಿದ್ದರೆ ಹೆಚ್ಚಿನ ವೈದ್ಯರನ್ನು ಕೂಡ ನೇಮಕ ಮಾಡಿಕೊಳ್ಳಲಾಗುತ್ತದೆ. ಅವಶ್ಯಕತೆಗಳಿಗೆ ಅನುಗುಣವಾಗಿ ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ಒಂದು ಗ್ರಾಮಕ್ಕೆ ಮೂವರು ವೈದ್ಯರನ್ನು ಕಳುಹಿಸಿದರೆ ಮಾನವ ಸಂಪನ್ಮೂಲ ಅನಗತ್ಯವಾಗಿ ವ್ಯರ್ಥವಾಗುತ್ತದೆ ಎಂದು ತಿಳಿಸಿದರು.
ಈ ನಿರ್ಧಾರದಿಂದ ಗ್ರಾಮೀಣ ಭಾಗದ ವೈದ್ಯರ ನೇಮಕಾತಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇಲ್ಲ, ಖಾಲಿ ಇದ್ದರೆ ತಕ್ಷಣ ಭರ್ತಿ ಮಾಡಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ