ಬೆಂಗಳೂರು :
ಡ್ರಗ್ ಪೆಡ್ಲರ್ಸ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು 8 ವಿದೇಶಿಗರು ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
ಕಳೆದ 15 ದಿನಗಳಲ್ಲಿ ಕಾಡುಗೋಡಿ, ಕೆ. ಆರ್. ಪುರ, ಸೋಲದೇವನಹಳ್ಳಿ, ಎಚ್ ಎಸ್ ಆರ್ ಲೇಔಟ್, ವೈಟ್ ಫೀಲ್ಡ್, ಬಾಣಸವಾಡಿ, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ 10 ಮಂದಿ ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ.