ಬೆಂಗಳೂರು
ರಾಜ್ಯ ಶಿಕ್ಷಣ ನೀತಿಯ(ಎಸ್‌ಇಪಿ) ರೂಪಿಸಲು ರಾಜ್ಯ ಸರ್ಕಾರ ರಚಿಸಿರುವ 15 ಸದಸ್ಯರ ಸಮಿತಿಯು ನವೆಂಬರ್ 2 ರಂದು ತನ್ನ ಚೊಚ್ಚಲ ಸಭೆ ನಡೆಸಲಿದೆ.
ರಾಜ್ಯ ಶಿಕ್ಷಣ ನೀತಿ ಪರಿಚಯಸಲು ಸಮಯ ತೆಗೆದುಕೊಳ್ಳುತ್ತದೆ. ಎಸ್ ಇಪಿ ಅಂತಿಮಗೊಳಿಸಿದ ನಂತರವೇ ಅಧ್ಯಾಯಗಳನ್ನು ಸೇರಿಸಲಾಗುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಯಲ್ಲಿರುವಂತೆ ಸಮಿತಿಯ ಪ್ರತಿ ಸದಸ್ಯರಿಗೂ ಒಂದೊಂದು ವಿಷಯವನ್ನು ನಿರ್ವಹಿಸಲು ಸೂಚಿಸಲಾಗುತ್ತದೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ನಿರ್ಧರವಾಗಿಲ್ಲ ಎಂದು ಅವರು ಹೇಳಿದ್ದಾರೆ.
ಅಕ್ಟೋಬರ್ 11 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೊ. ಸುಖದೇವ್ ಥೋರಟ್ ಅಧ್ಯಕ್ಷತೆಯಲ್ಲಿ 15 ಸದಸ್ಯರ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ. ಸದಸ್ಯ ಕಾರ್ಯದರ್ಶಿಯಾಗಿ ಉನ್ನತ ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ಡಾ.ಭಾಗ್ಯವಾನ ಎಸ್.ಮುದಿಗೌಡ್ರ ಅವರನ್ನು ನೇಮಕ ಮಾಡಲಾಗಿದೆ.
