ಮಂಡ್ಯ:
ನೀರಿನ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಹಿಂಗಾರು ಬೆಳೆ ಹಾಕದಂತೆ ರೈತರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ನೀರಿನ ಅಭಾವ ಎದುರಾಗಿದೆ. ಸಿಡಬ್ಲ್ಯುಆರ್ ಸಿ ತಮಿಳುನಾಡಿಗೆ ನೀರು ಹರಿಸಲು ಹೇಳಿದ್ದಾರೆ ನಾವು ಕೊಡುತ್ತೇವೆ ಎಂದು ಹೇಳಲು ಸಾಧ್ಯವಿಲ್ಲ. ನೀರು ಇದ್ದರೆ ಅಲ್ವಾ ಕೊಡಲು ಸಾಧ್ಯ? ಬೆಳೆದ ಬೆಳೆಗಳನ್ನು ಉಳಿಸುವ ಕೆಲಸ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಮಂಡ್ಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬರ, ಕುಡಿಯುವ ನೀರು, ವಿದ್ಯುತ್, ಆಸ್ಪತ್ರೆ ಸಮಸ್ಯೆ ಬಗ್ಗೆ ಚರ್ಚೆಯಾಗಿದೆ. ಕುಡಿಯುವ ನೀರು ಸಮಸ್ಯೆ ಆಗದಂತೆ ಕ್ರಮವಹಿಸಲು ಸೂಚಿಸಿದ್ದೇನೆ. ಒಂದುವೇಳೆ ಸಮಸ್ಯೆ ಎದುರಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ತೇನೆ.
ರೈತರಿಗೆ ವಿದ್ಯುತ್ 7 ತಾಸು ಕೊಡಲು ಸೂಚಿಸಿದ್ದೇವೆ ಆದರೆ ವಿದ್ಯುತ್ ಅಭಾವ ಇರುವುದರಿಂದ 5 ಗಂಟೆ ಅಷ್ಟೇ ವಿದ್ಯುತ್ ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಲೋಡ್ಶೆಡ್ಡಿಂಗ್ ಆಗದಂತೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಮಿಮ್ಸ್ ಕ್ಯಾನ್ಸರ್ ಆಸ್ಪತ್ರೆ ಹಾಗೂ ಹೆರಿಗೆ ಆಸ್ಪತ್ರೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.