ನವದೆಹಲಿ:
ಆರ್‌ಬಿಐನ ನೂತನ ಕಾರ್ಯ ನಿರ್ವಾಹಕ ನಿರ್ದೇಶಕರನ್ನಾಗಿ ಮನೋರಂಜನ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಮಿಶ್ರಾ ಅವರನ್ನು ನೇಮಕ ಮಾಡಿರುವ ಕುರಿತು ಆರ್‌ಬಿಐ ಬುಧವಾರ ಮಾಹಿತಿ ನೀಡಿದೆ. ಇದಕ್ಕೂ ಮುನ್ನ ಮಿಶ್ರಾ ಅವರು ನಿಯಂತ್ರಣ ಇಲಾಖೆಯಲ್ಲಿ ಮುಖ್ಯ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮನೋರಂಜನ್ ಮಿಶ್ರಾ ಅವರು ಆರ್‌ಬಿಐನಲ್ಲಿ ಮೂರು ದಶಕಗಳಿಗೂ ಹೆಚ್ಚು ಅನುಭವವನ್ನು ಹೊಂದಿದ್ದಾರೆ, ಬ್ಯಾಂಕ್‌ಗಳು ಮತ್ತು ಎನ್‌ಬಿಎಫ್‌ಸಿಗಳ ನಿಯಂತ್ರಣ, ಬ್ಯಾಂಕ್‌ಗಳ ಮೇಲ್ವಿಚಾರಣೆ ಮತ್ತು ಕರೆನ್ಸಿ ನಿರ್ವಹಣೆ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅಷ್ಟುಮಾತ್ರವಲ್ಲದೆ ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಾರ್ಯ ಗುಂಪುಗಳ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಆರ್ ಬಿಐ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ