ಕಲಬುರಗಿ:
ಚಿತ್ತಾಪುರ ತಾಲೂಕಿನ ವಾಡಿ ಸಮೀಪ ಆಟೋ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ.
ವಾಡಿಯಿಂದ ನಾಲವಾರ ಕಡೆ ತೆರಳುತ್ತಿದ್ದ ಆಟೋಗೆ ಹಲಕರ್ಟಾ ಬಳಿ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತಪಟ್ಟವರೆಲ್ಲೂ ನಾಲವಾರ ಗ್ರಾಮದ ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು ನಾಜ್ಮಿನ್ ಬೇಗಂ(28), ಬೀಬಿ ಫಾತಿಮಾ(12), ಅಬೂಬಕರ್(4), ಬೀಬಿ ಮರಿಯಮ್(3 ತಿಂಗಳು), ಮೊಹಮ್ಮದ್ ಪಾಷಾ(20) ಹಾಗೂ ಆಟೋ ಚಾಲಕ ಬಾಬಾ(35) ಎಂದು ಗುರುತಿಸಲಾಗಿದೆ ಮತ್ತು 10 ವರ್ಷದ ಬಾಲಕ ಮುಹಮ್ಮದ್ ಹುಸೇನ್ ಗಾಯಗೊಂಡಿದ್ದಾನೆ.
ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಿಸಲು ಚಿತ್ತಾಪುರಕ್ಕೆ ಹೋಗಿ ಮರಳಿ ನಾಲವಾರ ಗ್ರಾಮಕ್ಕೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ.ಅಪಘಾತ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.