ಬೆಂಗಳೂರು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ಗಾಗಿ ಇತರೆ ರೈಲುಗಳ ನಿಲುಗಡೆ ವಿರೋಧಿಸಿ ಪ್ರತಿಭಟನೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಅಲ್ಲದೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆಯಾಗಲಿದೆ. ನವೆಂಬರ್ 22 ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
![](https://prajapragathi.com/wp-content/uploads/2023/09/rain.gif)