ಬೆಂಗಳೂರು:
ಪಿಎಸ್‌ಐ ನೇಮಕಾತಿಗೆ ಮರು ಪರೀಕ್ಷೆ ನಿಗದಿ ಪಡಿಸಲಾಗಿತ್ತು. ಕೇವಲ 30 ದಿನಗಳ ಕಾಲಾವಕಾಶ ನೀಡಲಾಗಿದೆ. 2 ತಿಂಗಳು ಆದ್ರೂ ಕಾಲಾವಕಾಶ ನೀಡುವಂತೆ ಆಗ್ರಹಿಸಿ ಸಿಎಂ ಗೃಹ ಕಚೇರಿ ಕೃಷ್ಣ ಬಳಿಯಲ್ಲಿ ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಿಎಂ ಗೃಹ ಕಚೇರಿ ಕೃಷ್ಣ ಬಳಿಯಲ್ಲಿ ರಾಜ್ಯ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಪ್ರತಿಭಟನೆಯ ಬಿಸಿ ಕೂಡ ತಟ್ಟಿದೆ.
545 ಪಿಎಸ್‌ಐ ನೇಮಕಾತಿ ಪರೀಕ್ಷೆಗಾಗಿ ಮರು ಪರೀಕ್ಷೆ ನಿಗದಿ ಪಡಿಸಿರೋ ಕಾಲಾವಕಾಶ ಕಡಿಮೆ ಇದೆ. 30 ದಿನ ಯಾವುದಕ್ಕೂ ಸಾಕಾಗಲ್ಲ. ಸರಿಯಾಗಿ ಓದಿ, ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳೋದಕ್ಕೂ ಆಗೋದಿಲ್ಲ. ಕನಿಷ್ಠ 2 ತಿಂಗಳು ಕಾಲಾವಕಾಶ ನೀಡಬೇಕು ಎಂಬುದಾಗಿ ಒತ್ತಾಯಿಸಿ ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸಿದರು.ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಂತ ಪಿಎಸ್‌ಐ ಹುದ್ದೆ ಆಕಾಂಕ್ಷಿಗಳನ್ನು ಪೊಲೀಸರು ವಶಕ್ಕೆ ಪಡೆದರು. ಸಿಎಂ ಗೃಹಕಚೇರಿಯಿಂದ ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ