ನವದೆಹಲಿ:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರೂ. 1.38 ಲಕ್ಷ ದೇಣಿಗೆ ನೀಡುವ ಮೂಲಕ ಸೋಮವಾರ ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿದರು.ಉತ್ತಮ ಭಾರತ ಭಾರತ ನಿರ್ಮಿಸುವ ನಿಟ್ಟಿನಲ್ಲಿ ಬೆಂಬಲಿಗರು ಹಣವನ್ನು ದೇಣಿಗೆ ನೀಡುವಂತೆ ಅವರು ಒತ್ತಾಯಿಸಿದ್ದಾರೆ.
ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೀವು ಕೇವಲ ಶ್ರೀಮಂತರಿಂದ ಹಣವನ್ನು ಸಂಗ್ರಹಿಸುತ್ತಿದ್ದರೆ, ಅವರ ಇಚ್ಛೆಗೆ ಅನುಗುಣವಾಗಿ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಮಾಡಬೇಕಾಗುತ್ತದೆ. ನಮ್ಮ ಪಕ್ಷವು ಯಾವಾಗಲೂ ಹಿಂದುಳಿದವರು, ದಲಿತರು, ಆದಿವಾಸಿಗಳು, ಒಬಿಸಿಗಳು, ಅಲ್ಪಸಂಖ್ಯಾತರು ಮತ್ತು ಮೇಲ್ವರ್ಗದವರೊಂದಿಗೆ ಇರುತ್ತದೆ. ನಾವು ಅವರಿಗೆ ಸಹಾಯ ಮಾಡಲು ಬಯಸುತ್ತೇವೆ. ಇದು ಸಾಮಾನ್ಯ ಜನರ ನೆರವಿನಿಂದ ದೇಶ ಕಟ್ಟುವ ಉಪಕ್ರಮವಾಗಿದೆ ಎಂದರು.
“ಇದು ಅಭಿಯಾನಕ್ಕಿಂತ ಹೆಚ್ಚಿನದು. ಇದು ಅಂಚಿನಲ್ಲಿರುವ ಸಮುದಾಯಗಳ ಹಕ್ಕುಗಳನ್ನು ಎತ್ತಿಹಿಡಿಯುವ ಬದ್ಧತೆಯಾಗಿದೆ, ಅಸಮಾನತೆಗಳನ್ನು ನಿವಾರಿಸಲು ಮತ್ತು ಶ್ರೀಮಂತರಿಗೆ ಒಲವು ತೋರುವ ಸರ್ಕಾರದ ವಿರುದ್ಧ ತೋರುವ ವಿರೋಧವಾಗಿದೆ. ನಾವು ಹೆಚ್ಚಿನ ನಿರುದ್ಯೋಗ ಮತ್ತು ವೆಚ್ಚಗಳ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಖಜಾಂಚಿ ಅಜಯ್ ಮಾಕನ್ ಹೇಳಿದರು.