ತುಮಕೂರು
ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೆನುಗಳು ದಾಳಿ ಮಾಡಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ.
ತುಮಕೂರು ನಗರದ ಶಿರಾ ಗೇಟ್ ಬಳಿಯ ಪಿಎನ್ ಆರ್( ಪಂಡಿತ್ ನಾರಾಯಣ್ ಪಾಳ್ಯ) ಪಾಳ್ಯ ದಲ್ಲಿ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು.ಇನ್ನು ಶಾಲೆ ಆರಂಭವಾಗುವ ಸಂದರ್ಭದಲ್ಲಿ ಶಾಲಾ ಮಕ್ಕಳ ಮೇಲೆ ಹೆಜ್ಜೇನು ಹುಳುಗಳು ಏಕಾಏಕಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ಸುಮಾರು 12ಕು ಹೆಚ್ಚು ವಿದ್ಯಾರ್ಥಿಗಳು ಜೇನು ಹುಳಗಳ ಕಡಿತದಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.ಇನ್ನು ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಯಾವುದೇ ಗಂಭೀರ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ.ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
