ಬೆಂಗಳೂರು:
ಎಲ್ಲಾ ಶಾಲೆಗಳ 6 ನೇ ತರಗತಿ ನಂತರದ ವಿದ್ಯಾರ್ಥಿಗಳಿಗೆ ಗಾಂಧೀಜಿ ವಿಚಾರ ಕುರಿತ ಪ್ರಬಂಧ ಸ್ಪರ್ಧೆ ಆಯೋಜಿಸಲು ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ, ’21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು” ಎಂಬ ವಿಷಯದ ಕುರಿತಾದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವುದರಿಂದ ಗಾಂಧೀಜಿಯವರನ್ನು ಅರಿತುಕೊಳ್ಳಲು ಇನ್ನೂ ಹೆಚ್ಚಿನ ಅವಕಾಶ ನೀಡಿದಂತಾಗುತ್ತದೆ, ಹಾಗಾಗಿ ಈ ತಿಂಗಳ ಅಂತ್ಯದೊಳಗೆ ಸ್ಪರ್ಧೆಗಳನ್ನು ನಡೆಸಲು ಕ್ರಮ ವಹಿಸಬೇಕು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
‘ಪ್ರತಿ ಶಾಲೆಗಳ 6ನೆ ತರಗತಿ ನಂತರದ ವಿದ್ಯಾರ್ಥಿಗಳಿಗೆ ( ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ವರೆಗೆ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಪ್ರಬಂಧ ಸ್ಪರ್ಧೆ ಆಯೋಜಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ