ಮುಂಬೈ:
ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ.
ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಮಾಹಿತಿ ರವಾನೆಯಾಗಿದ್ದು, ಸಂದೇಶ ಕಳುಹಿಸಿದವ ಬಗ್ಗೆ ಮಾಹಿತಿ ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಆರಂಭಿಸಿದ್ದಾರೆ.
ಬಾಂಬ್ ಪತ್ತೆ ಮತ್ತು ವಿಲೇವಾರಿ ಪತ್ತೆ ದಳ(BDDS) ಮತ್ತು ಶ್ವಾನದಳ ಕೂಡಲೇ ಸ್ಥಳಗಳಿಗೆ ತೆರಳಿ ತೀವ್ರ ತಪಾಸಣೆ ನಡೆಸಿದ್ದು ಯಾವುದೇ ಬಾಂಬ್ ಇಟ್ಟಿರುವುದು ಪತ್ತೆಯಾಗಿಲ್ಲ. ಪೊಲೀಸರು ಅಪರಿಚಿತರ ಮೇಲೆ ಕೇಸು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.ಮುಂಬೈ ನಗರದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಫೋನ್ ಅಥವಾ ಸಂದೇಶ ಬಂದಿರುವುದು ಇದೇ ಮೊದಲಲ್ಲ. ಈ ಮೊದಲು ಮುಂಬೈ ಪೊಲೀಸ್ ಮತ್ತು ಕಂಟ್ರೋಲ್ ರೂಂಗೆ ಬೆದರಿಕೆಗಳು ಬಂದಿದ್ದವು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ