ನವದೆಹಲಿ:
14ನೇ ಹಣಕಾಸು ಆಯೋಗದಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ 4.71 ಶೇಕಡಾ ಬಂದಿತ್ತು.15ನೇ ಹಣಕಾಸು ಆಯೋಗದಲ್ಲಿ ಅದು ಶೇಕಡಾ 3.64 ಕ್ಕೆ ಇಳಿಯಿತು ಇದರಿಂದ ಕರ್ನಾಟಕಕ್ಕೆ ಶೇಕಡಾ 40ರಿಂದ 45ರಷ್ಟು ತೆರಿಗೆ ಬರುವುದು ಕಳೆದುಕೊಂಡಿದ್ದೇವೆ. 14ನೇ ಹಣಕಾಸು ಆಯೋಗದ ಮಾನದಂಡವನ್ನೇ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಸರಿಸಿದ್ದರೆ 62 ಸಾವಿರದ 098 ಕೋಟಿ ರೂಪಾಯಿ ಹೆಚ್ಚಾಗಿ ಬರುತ್ತಿತ್ತು. ಅದನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅಂಕಿಅಂಶ ಸಮೇತ ವಿವರಿಸಿದರು.
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ನಾಯಕರು ‘ನಮ್ಮ ತೆರಿಗೆ ನಮ್ಮ ಹಕ್ಕು’ ಎಂಬ ಉದ್ಘೋಷದೊಂದಿಗೆ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಇಂದು ಇನ್ನು ಕೆಲವೇ ನಿಮಿಷಗಳಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಅದಕ್ಕೆ ಮುನ್ನ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಪುನರುಚ್ಛರಿಸಿದರು. ಅವರ ಮಾತಿಗೆ ಡಿಸಿಎಂ ಡಿ ಕೆ ಶಿವಕುಮಾರ್ ದನಿಗೂಡಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬರ ಪರಿಹಾರ ಬಂದಿಲ್ಲ. ರಾಜ್ಯದಲ್ಲಿ ಈ ವರ್ಷ ಆಗಿರುವ ಬರಗಾಲ ಬಗ್ಗೆ ಮನವಿ ಸಲ್ಲಿಸಿದ್ದೆವು. ಕೇಂದ್ರಕ್ಕೆ ಮನವಿ ಸಲ್ಲಿಸಿ, ಬರ ಅಧ್ಯಯನ ತಂಡ ಬಂದು ವರದಿ ನೀಡಿದ್ದರು. ನಂತರ ಹಲವು ಸಚಿವರು ಕೇಂದ್ರದ ಸಚಿವರುಗಳು, ಅಧಿಕಾರಿಗಳನ್ನು ಭೇಟಿ ಮಾಡಿದರು. ನಂತರ ನಾನೇ ಸ್ವತಃ ಪ್ರಧಾನ ಮಂತ್ರಿ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆ. 5ತಿಂಗಳು ಕಳೆದರೂ ಇನ್ನೂ ಪರಿಹಾರ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ