ಚೆನ್ನೈ:
ಲೋಕಸಭೆ ಚುನಾವಣೆಗೆ ಇನ್ನೆರಡು ತಿಂಗಳಷ್ಟೇ ಬಾಕಿ ಉಳಿದಿದ್ದು, ಇದಕ್ಕಾಗಿ ಎಲ್ಲ ಪಕ್ಷಗಳು ಚುನಾವಣಾ ಕಾರ್ಯ ಆರಂಭಿಸಿವೆ. ಮೈತ್ರಿ, ಕ್ಷೇತ್ರ ಹಂಚಿಕೆ ಮಾತುಕತೆ ಆರಂಭವಾಗಿದೆ. ತಮಿಳುನಾಡಿನಲ್ಲಿ ರಾಜಕೀಯ ಪಕ್ಷಗಳು ಮೈತ್ರಿ ಮಾತುಕತೆ ಮುಗಿಸಿ ಡೀಲ್ ಕುದುರಿಸುವ ಹಂತದಲ್ಲಿವೆ.
ತಮಿಳುನಾಡಿನಲ್ಲೂ ಮೈತ್ರಿ ಪ್ರಯತ್ನಗಳು ಆರಂಭವಾಗಿದೆ. ರಾಜ್ಯದ ಆಡಳಿತಾರೂಢ ಡಿಎಂಕೆ ಮತ್ತು ನಟ-ರಾಜಕಾರಣಿ ಕಮಲ್ ಹಾಸನ್ ಅವರ ಪಕ್ಷ ಮಕ್ಕಳ್ ನೀಧಿ ಮೈಯಂ (ಎಂಎನ್ಎಂ) ವಿಲೀನಗೊಳ್ಳುವ ಸಾಧ್ಯತೆಯಿದೆ.
ಎರಡೂ ಪಕ್ಷಗಳಲ್ಲಿ ಸೀಟು ಹಂಚಿಕೆ ಕುರಿತು ಅಂತಿಮ ಚರ್ಚೆ ನಡೆಯುತ್ತಿದೆ ಎಂದು ವರದಿಯಾಗಿದೆ. ಇಬ್ಬರೂ ಒಟ್ಟಿಗೆ ಚುನಾವಣೆಗೆ ಸ್ಪರ್ಧಿಸುವುದಾಗಿ ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ. ಡಿಎಂಕೆ ನೇತೃತ್ವದ ಮೈತ್ರಿಕೂಟ ಸೇರುವ ಬಗ್ಗೆ ಕಮಲ್ ಹಾಸನ್ ಈಗಾಗಲೇ ಸುಳಿವು ನೀಡಿದ್ದರು. ಇದರಲ್ಲಿ ಕಾಂಗ್ರೆಸ್ ಕೂಡ ಭಾಗಿಯಾಗಿದೆ. ಇದೀಗ ಎಂಕೆ ಸ್ಟಾಲಿನ್ ಅವರೊಂದಿಗಿನ ಭೇಟಿಯ ನಂತರ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸುವುದಾಗಿ ಘೋಷಿಸುವ ಸಾಧ್ಯತೆಯಿದೆ.