2035 ರ ವೇಳೆಗೆ ಭಾರತಕ್ಕೆ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದಲಿದೆ : ಮೋದಿ

ತಿರುವನಂತಪುರಂ:

    2035 ರ ವೇಳೆಗೆ ಭಾರತಕ್ಕೆ ತನ್ನದೇ ಸ್ವಂತ ಬಾಹ್ಯಾಕಾಶ ನಿಲ್ದಾಣ ಇರಲಿದ್ದು, ಇದು ಬಾಹ್ಯಾಕಾಶದ ಅಧ್ಯಯನಕ್ಕೆ ಪೂರಕವಾಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಿರುವನಂತಪುರಂ ನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (ವಿಎಸ್ಎಸ್ ಸಿ) ನಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, ಭಾರತೀಯ ಗಗನಯಾತ್ರಿ ಚಂದ್ರನ ಮೇಲೆ ನಮ್ಮದೇ ರಾಕೆಟ್ ನಲ್ಲಿ ಇಳಿಯಲಿದ್ದಾರೆ ಎಂದು ಹೇಳಿದ್ದಾರೆ.

   2035 ರ ವೇಳೆಗೆ ಭಾರತ ತನ್ನದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ಹೊಂದಲಿದ್ದು, ಬಾಹ್ಯಾಕಾಶದ ಅಜ್ಞಾತ ವಿಸ್ತಾರಗಳ ಅಧ್ಯಯನಕ್ಕೆ ಇದು ಸಹಕಾರಿಯಾಗಲಿದೆ. ಈ ಅಮೃತಕಾಲದಲ್ಲಿ ಭಾರತೀಯ ಗಗನಯಾನಿಗಳು ಚಂದ್ರನ ಮೇಲೆ ನಮ್ಮ ಸ್ವಂತ ರಾಕೆಟ್ ನಿಂದ ಇಳಿಯಲಿದ್ದಾರೆ ಎಂದು ಹೇಳಿದ್ದಾರೆ. ಭಾರತ 21 ನೇ ಶತಮಾನದಲ್ಲಿ ಜಾಗತಿಕ ಮಟ್ಟದಲ್ಲಿ ಬಲಿಷ್ಠ ದೇಶವಾಗಿ ಹೊರಹೊಮ್ಮುತ್ತಿದ್ದು ಎಲ್ಲಾ ಕ್ಷೇತ್ರಗಳಲ್ಲಿಯೂ ಗಣನೀಯ ಅಭಿವೃದ್ಧಿ ಸಾಧಿಸುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.

   ಕಳೆದ 10 ವರ್ಷಗಳಲ್ಲಿ ಭಾರತ 400 ಕ್ಕೂ ಹೆಚ್ಚು ಉಪಗ್ರಹಗಳನ್ನು ಉಡಾವಣೆ ಮಾಡಿದೆ, 10 ವರ್ಷಗಳ ಹಿಂದೆ ಕೇವಲ 33 ಉಪಗ್ರಹಗಳನ್ನು ಉಡಾವಣೆ ಮಾಡಲಾಗಿತ್ತು ಎಂದು ಪ್ರಧಾನಿ ಮೋದಿ ಹೇಳಿದ್ದು, ಗಗನ್‌ಯಾನ್ ಮಿಷನ್‌ನಲ್ಲಿ ಬಳಸಲಾಗುತ್ತಿರುವ ಉಪಕರಣಗಳು ಹೆಚ್ಚಾಗಿ ಭಾರತದಲ್ಲಿಯೇ ತಯಾರಿಸಲ್ಪಟ್ಟಿರುವ ಬಗ್ಗೆ ಪ್ರಧಾನಿ ಮೋದಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

   ದೇಶದ ಚೊಚ್ಚಲ ಮಾನವ ಸಹಿತ ಬಾಹ್ಯಾಕಾಶ ಯಾನ ಗಗನಯಾನಗೆ ತರಬೇತಿ ಪಡೆಯುತ್ತಿರುವ ನಾಲ್ವರು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರಕಟಿಸಿದ್ದಾರೆ.

    ಪ್ರಧಾನಮಂತ್ರಿಯವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದ ಮೂರು ಪ್ರಮುಖ ತಾಂತ್ರಿಕ ಸೌಲಭ್ಯಗಳನ್ನು ಉದ್ಘಾಟಿಸಲು VSSC ಗೆ ಬಂದಿದ್ದರು. ಕೇರಳ ರಾಜ್ಯದ ರಾಜಧಾನಿ ಬಳಿಯ ತುಂಬಾದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಭೇಟಿ ನೀಡಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಗಗನಯಾನ ಮಿಷನ್ ಗೆ ಆಯ್ಕೆಯಾಗಿರುವ ನಾಲ್ಕು ಮಂದಿ ಗಗನಯಾನಿಗಳ ಹೆಸರನ್ನು ಘೋಷಣೆ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link