ತುಮಕೂರು: ಕಾಂಗ್ರೆಸ್‌ ಕಛೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ….!

ತುಮಕೂರು:

   ”ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

   ನಗರದ ಭದ್ರಮ್ಮ ಚೌಲ್ಟ್ರಿ ವೃತ್ತದಲ್ಲಿರುವಂತಹ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕರ‍್ಯರ‍್ತರು ಸಂಸದ ಜಿ ಎಸ್ ಬಸವರಾಜ್ ನೇತೃತ್ವದಲ್ಲಿ ರ‍್ಕಾರದ ವಿರುದ್ಧ ಹಾಗೂ ದೇಶದ್ರೋಹಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

   ಕಾಂಗ್ರೆಸ್ ಕಚೇರಿ ಎದುರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದು ಎಂಬ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಕಾಂಗ್ರೆಸ್ ಕಚೇರಿ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ ವ್ಯವಸ್ಥೆ ಮಾಡಿದ್ದರು.

   ಇನ್ನು ಕೆಲ ಬಿಜೆಪಿ ಕರ‍್ಯರ‍್ತರು ಕಾಂಗ್ರೆಸ್ ಕಚೇರಿ ಒಳಗೆ ನುಗ್ಗಲು ಯತ್ನಿಸಿದ ಸಂರ‍್ಭದಲ್ಲಿ ಪೊಲೀಸರು ಹಾಗೂ ಬಿಜೆಪಿ ಕರ‍್ಯರ‍್ತರ ನಡುವೆ ಭಾರಿ ಮಾತಿನ ಚಕಮಕಿ ನಡೆಯಿತು. ಸುಮಾರು ೫೦ಕ್ಕೂ ಹೆಚ್ಚು ಮಂದಿ ಬಿಜೆಪಿ ಕರ‍್ಯರ‍್ತರನ್ನು ಪೊಲೀಸರು ಬಂಧಿಸಿ ವಶಕ್ಕೆ ತೆಗೆದುಕೊಂಡರು ಅಲ್ಲದೆ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು. ಈ ಸಂರ‍್ಭದಲ್ಲಿ ಡಿವೈಎಸ್ಪಿ ಚಂದ್ರಶೇಖರ್ ಅವರನ್ನು ಕೆಲ ಬಿಜೆಪಿ ಕರ‍್ಯರ‍್ತರು ತಳ್ಳಾಟ ನೂಕಾಟ ನಡೆಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link