ಹೈದರಾಬಾದ್:
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಿಆರ್‌ಎಸ್ ನಾಯಕಿ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಬಂಧಿಸಿದ್ದಾರೆ.
ಇಂದು ಹೈದರಾಬಾದ್‌ನಲ್ಲಿರುವ ಬಿಆರ್ ಎಸ್ ಎಂಎಲ್ ಸಿ ಕೆ ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಇಡಿ ಅಧಿಕಾರಿಗಳು, ಕೆಲವು ಗಂಟೆಗಳ ನಂತರ ಕೆಸಿಆರ್ ಪುತ್ರಿಯನ್ನು ಬಂಧಿಸಿದೆ ಮತ್ತು ಅವರನ್ನು ದೆಹಲಿಗೆ ಕರೆದೊಯ್ಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
44 ವರ್ಷದ ಕೆ ಕವಿತಾ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಇಡಿ ಹಲವು ಬಾರಿ ವಿಚಾರಣೆಗೆ ಒಳಪಡಿಸಿದೆ ಮತ್ತು ಅವರ ಹೇಳಿಕೆಯನ್ನು ದಾಖಲಿಸಿದೆ. ಆದರೆ ಈ ವರ್ಷ ಇಡಿ ನೀಡಿದ್ದ ಎರಡು ಸಮನ್ಸ್‌ಗಳನ್ನು ಅವರು ತಪ್ಪಿಸಿದ್ದರು.