ಚೆನ್ನೈ:
ಚೆನ್ನೈ ನಲ್ಲಿ ನಡೆದ ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲು ಕಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆರ್ ಸಿಬಿ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 173 ರನ್ ಗಳಿಸಿತು.
ಆರ್ ಸಿಬಿ ಪರ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ 20 ಎಸೆತಗಳಲ್ಲಿ 21 ರನ್ ಗಳಿಸಿದರೆ, ಫಾಫ್ ಡು ಪ್ಲೆಸಿಸ್ 23 ಎಸೆತಗಳಲ್ಲಿ 35 ರನ್ ಗಳನ್ನು ಗಳಿಸಿ ತಂಡಕ್ಕೆ ನೆರವಾದರು. ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್ ಸೇರಿದಂತೆ ಮಧ್ಯಮಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯ ತಂಡಕ್ಕೆ ದುಬಾರಿಯಾಗಿ ಪರಿಣಮಿಸಿತು.
ಅನುಜ್ ರಾವತ್ 25 ಎಸೆತಗಳಲ್ಲಿ 48 ರನ್ ಗಳಿಸಿ ತಂಡ 173 ರನ್ ಗಳಿಸಲು ನೆರವಾದರು. ದಿನೇಶ್ ಕಾರ್ತಿನ್ ಔಟ್ ಆಗದೇ 26 ಎಸೆತಗಳಲ್ಲಿ 38 ರನ್ ಗಳಿಸಿದರು. 174 ರನ್ ಗಳ ಗುರಿ ಬೆನ್ನಟ್ಟಿದ ಸಿಎಸ್ ಕೆ ತಂಡದ ಮೇಲೆ ಆರ್ ಸಿಬಿ ಬೌಲರ್ ಗಳು ಆರಂಭದಲ್ಲಿ ನಿಯಂತ್ರಣ ಸಾಧಿಸಿದರು. ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ 15 ಎಸೆತಗಳಲ್ಲಿ 15 ರನ್ ರಚಿನ್ ರವೀಂದ್ರ 15 ಎಸೆತಗಳಲ್ಲಿ 37 ರನ್ ಗಳಿಸಿದರೆ, ಅಜಿಂಕ್ಯಾ ರೆಹಾನೆ 19 ಎಸೆತಗಳಲ್ಲಿ 27 ರನ್ ಡೇರಿಲ್ ಮಿಚೆಲ್ 18 ಎಸೆತಗಳಲ್ಲಿ 22 ರನ್ ಗಳಿಸಿದರು. ಶಿವಂ ದುಬೆ 28 ಎಸೆತಗಳಲ್ಲಿ 34 ರನ್ ಗಳಿಸಿದರೆ, ರವೀಂದ್ರ ಜಡೇಜಾ 17 ಎಸೆತಗಳಲ್ಲಿ 25 ರನ್ ಗಳಿಸಿ ತಂಡ ಗೆಲ್ಲುವುದಕ್ಕೆ ನೆರವಾದರು.