ಚಾಮರಾಜನಗರ
ಕೊಳ್ಳೇಗಾಲ ಶಾಸಕರ ಕಾರಿನ ಟೈಯರ್ ಬ್ಲಾಸ್ಟ್ ಆಗಿ ಅಪಘಾತ ಸಂಭವಿಸಿದ ಘಟನೆ ಮೈಸೂರಿನ ನಾಡನಹಳ್ಳಿ ಬಳಿ ನಡೆದಿದೆ.
ಬುಧವಾರ ರಾತ್ರಿ ಸುಮಾರು 11.50ರ ವೇಳೆಗೆ ಕೊಳ್ಳೇಗಾಲದಿಂದ ಮೈಸೂರಿನತ್ತ ತೆರಳುತ್ತಿರುವಾಗ ನಾಡನಹಳ್ಳಿ ಬಳಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಕಾರು ಅಪಘಾತವಾಗಿದೆ. ಈ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಘಟನೆಯಲ್ಲಿ ಶಾಸಕರು ಅದೃಷ್ಟವಶಾತ್ ಶಾಸಕ ಎ.ಆರ್.ಕೃಷ್ಣಮೂರ್ತಿ, ಶಾಸಕರ ಆಪ್ತ ಸಹಾಯಕ ಹೊಂಗನೂರು ಚೇತನ್ ಮತ್ತು ವಾಹನ ಚಾಲಕ ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮೈಸೂರಿನತ್ತ ತೆರಳುತ್ತಿದ್ದಾಗ ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ, ರಸ್ತೆಬದಿ ಹಳ್ಳಕೆ ಇಳಿದು ನಿಂತಿದೆ. ಯಾವುದೇ ಬೇರೆ ವಾಹನಗಳು ಆ ವೇಳೆ ಇಲ್ಲದಿದ್ದು, ಜೊತೆಗೆ ಕಾರು ರಸ್ತೆಬದಿಯ ಹಳ್ಳಕ್ಕೆ ಬಂದು ನಿಂತಿದ್ದರಿಂದ ಎಲ್ಲರೂ ಪ್ರಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ