ಭವಾನಿ ರೇವಣ್ಣಗೆ SIT ನೋಟಿಸ್‌ ….!

ಹಾಸನ :

     ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶ್ಯಾದ್ಯಂತ ಸದ್ದು ಮಾಡುತ್ತಿದ್ದು, ಈಗಾಗಲೇ ಈ ಸಂಬಂಧ ಸಂತ್ರಸ್ತೆಯರ ಆರೋಪದ ಮೇಲೆ ಎಸ್‌ಐಟಿ 2ನೇ ಬಾರಿ ನೋಟಿಸ್‌ ನೀಡಿದರೂ ಸಹ ಮಾಜಿ.ಸಚಿವ ಎಚ್‌.ಡಿ.ರೇವಣ್ಣ ವಿಚಾರಣಗೆ ಗೈರಾಗಿದ್ದು, ಇದೀಗ ಮೂರನೇ ನೋಟಿಸ್‌ ಜಾರಿ ಮಾಡಲು ಸಜ್ಜಾಗಿದೆ. ಮತ್ತೊಂದೆಡೆ ಮನೆಗೆಲಸದಾಕೆಯ ದೌರ್ಜನ್ಯ ಆರೋಪದ ಮೇಲೆ ಭವಾನಿ ರೇವಣ್ಣಗೂ ನೋಟಿಸ್‌ ಜಾರಿ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಅಶ್ಲೀಲ ವಿಡಿಯೋ ಪ್ರಕರಣ ಬಯಲಾಗುತ್ತಿದ್ದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದು, ಎಸ್‌ಐಟಿ ಈ ಪ್ರಕರಣದ ಹಿಂದೆ ಇನ್ನು ಯಾರೆಲ್ಲ ಇದ್ದಾರೆ ಎಂಬ ಮಾಹಿತಿಯನ್ನು ಜಾಲಾಡಲು ಮುಂದಾಗಿದೆ. ಇದೀಗ ಮತ್ತೊಂದು ಪ್ರಕರಣ ದಾಖಲಾಗಿರುವ ಹಿನ್ನೆಲೆ ಪ್ರಜ್ವಲ್‌ ರೇವಣ್ಣಗೆ ಮತ್ತಷ್ಟು ಆತಂಕ ಎದುರಾದಂತಾಗಿದೆ.

    ಇದರ ಬೆನ್ನಲ್ಲೇ ಇಂದು (ಮೇ 03) ಪೊಲೀಸರು ಹೊಳೆನರಸೀಪುರದಲ್ಲಿರುವ ರೇವಣ್ಣ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಮನೆಯಲ್ಲಿದ್ದ ರೇವಣ್ಣ ಪತ್ನಿ ಭವಾನಿ ರೇವಣ್ಣಗೂ ಕೂಡ ವಿಚಾರಣಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ. ಅಲ್ಲದೆ ಇಂದು ಅಥವಾ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸ್ಥಳೀಯ ಪೊಲೀಸರ ಮೂಲಕ ಎಸ್‌ಐಟಿ ನೋಟಿಸ್‌ ಜಾರಿ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link