ಚಿತ್ರದುರ್ಗ
ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ 4,00,000 ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗುತ್ತಿಗೆದಾರನ ಕಾಮಗಾರಿಗೆ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಗುತ್ತಿಗೆದಾರ ಸಿದ್ದನಗೌಡನಿಂದ 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಯನ್ನು ಬಲೆಗೆ ಕೆಡವಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ದಾಳಿಯನ್ನು ಲೋಕಾಯುಕ್ತ ಡಿವೈಎಸ್ಪಿ ಬಸವರಾಜ್ ನೇತೃತ್ವದಲ್ಲಿ ನಡೆಸಲಾಗಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ