ಅಲ್ಪಮತಕ್ಕೆ ಕುಸಿದ ಹರಿಯಾಣ ಸರ್ಕಾರ….! : ರಾಜ್ಯಪಾಲರಿಗೆ ದುಷ್ಯಂತ್ ಚೌಟಾಲ ಪತ್ರ

ಹರ್ಯಾಣ

    ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಪಕ್ಷೇತರ ಶಾಸಕರು ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದೆ.

    ಸರ್ಕಾರದ ಬೆಂಬಲ ಅಲ್ಪಮತಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಹರ್ಯಾಣದ ಮಾಜಿ ಉಪಮುಖ್ಯಮಂತ್ರಿ ಹಾಗೂ ಜೆಜೆಪಿ ನಾಯಕ ದುಷ್ಯಂತ್ ಚೌಟಾಲ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ಪತ್ರ ಬರೆದಿದ್ದು, ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸಲು ಸೂಚನೆ ನೀಡುವಂತೆ ಆಗ್ರಹಿಸಿದ್ದಾರೆ. ಹರ್ಯಾಣದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ನಂತರ ಚುನಾವಣೆ ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

    ಹರ್ಯಾಣದ ಪ್ರಮುಖ ವಿಪಕ್ಷವಾಗಿರುವ ಕಾಂಗ್ರೆಸ್ ಜೆಜೆಪಿ, ಐಎನ್ ಎಲ್ ಡಿ ಹಾಗೂ ಪಕ್ಷೇತರ ಶಾಸಕ ಬಾಲರಾಜ್ ಕುಂಡು ಅವರಿಗೆ ಇದೇ ರೀತಿಯ ಪತ್ರಗಳನ್ನು ರಾಜ್ಯಪಾಲರಿಗೆ ಬರೆದು ಬಿಜೆಪಿಯನ್ನು ವಿರೋಧಿಸುವಂತೆ ಮನವಿ ಮಾಡಿದೆ.

    “ರೈತರಿಗೆ ಸಂಬಂಧಿಸಿದ ವಿಷಯಗಳು ಸೇರಿದಂತೆ ವಿವಿಧ ವಿಷಯಗಳಲ್ಲಿ ಸರ್ಕಾರದ ನಡೆ ವಿರುದ್ಧ ಅಸಮಾಧಾನಗೊಂಡು ಬಿಜೆಪಿಗೆ ನೀಡಿದ್ದ ಬೆಂಬಲ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಪಕ್ಷೇತರ ಶಾಸಕರು ಮೇ.08 ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

    ಮೂವರು ಸ್ವತಂತ್ರ ಶಾಸಕರಾದ ಸೋಂಬಿರ್ ಸಾಂಗ್ವಾನ್, ರಣಧೀರ್ ಸಿಂಗ್ ಗೊಲ್ಲೆನ್ ಮತ್ತು ಧರಂಪಾಲ್ ಗೊಂಡರ್ ಬಿಜೆಪಿ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ಹಿಂಪಡೆದು ಕಾಂಗ್ರೆಸ್‌ಗೆ ಬೆಂಬಲ ನೀಡಿರುವುದಾಗಿ ತಿಳಿಸಿದ್ದಾರೆ.

Recent Articles

spot_img

Related Stories

Share via
Copy link