ವಾರಣಾಸಿ:
ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಗ್ಗೆ 11:40ರ ಶುಭ ಮುಹೂರ್ತದಲ್ಲಿ ಮೋದಿ ನಾಮಪತ್ರ ಸಲ್ಲಿಸುವರು. ನಾಮಪತ್ರ ಸಲ್ಲಿಕೆಗೆ ಮೊದಲು ಕಾಶಿಯ ಕೊತ್ವಾಲ್ ಕಾಲಭೈರವನ ಆಶೀರ್ವಾದ ಪಡೆಯಲಿದ್ದಾರೆ.
ಈ ದಿನ ಅಭಿಜಿತ್ ಮುಹೂರ್ತ, ಆನಂದ ಯೋಗ, ಸರ್ವಾರ್ಥಸಿದ್ಧಿ ಯೋಗ ಜೊತೆಗೆ ಭೌಮ ಪುಷ್ಯ ನಕ್ಷತ್ರದ ಕಾಕತಾಳೀಯ ಸಂಗಮವಾಗಿದ್ದು, ಇದು ಉತ್ತಮ ಮಹತ್ವದ ದಿನ ಎಂದು ಅಯೋಧ್ಯ ರಾಮ ಮಂದಿರ ಶಂಕುಸ್ಥಾಪನೆಗೆ ಶುಭ ಮುಹೂರ್ತ ನೀಡಿದ್ದ ಪಂಡಿತ್ ಗಣೇಶ್ವರ ಶಾಸ್ತ್ರಿ ದ್ರಾವಿಡ್ ತಿಳಿಸಿದ್ದಾರೆ.